Thursday, June 4, 2026
Homeತಾಜಾ ಸುದ್ದಿಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ನೇಮಕ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ನೇಮಕ

- Advertisement -
- Advertisement -

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಲಾಗಿದೆ. ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಸದ್ಯಕ್ಕೆ ಜಮೀನ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಮೀರ್ ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಪ್ರಸ್ತುತ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾರೆ.

ನರೇಗಾದಲ್ಲಿ ಸಮಯಕ್ಕೆ ಸರಿಯಾಗಿ ಮಾನವ ದಿನಗಳ ಕೂಲಿ ಹಣ ಪಾವತಿಯಾಗಬೇಕು. ಅನಗತ್ಯ ಲೇಟ್ ಆಗಬಾರದು ಎನ್ನುವ ಸೂಚನೆ ನೀಡಿದ್ರು.

- Advertisement -

Latest News

error: Content is protected !!