Thursday, May 16, 2024
Homeಉದ್ಯಮಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್: ಆಧಾರರಹಿತ ಶೂನ್ಯ ಬಡ್ಡಿ ದರದಲ್ಲಿ ಸಾಲ

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್: ಆಧಾರರಹಿತ ಶೂನ್ಯ ಬಡ್ಡಿ ದರದಲ್ಲಿ ಸಾಲ

spot_img
- Advertisement -
- Advertisement -

ಬೆಂಗಳೂರು: ಹೈನುಗಾರಿಕೆಗೆ 1.6 ಲಕ್ಷ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ.3 ಲಕ್ಷ ರೂಪಾಯಿವರೆಗೂ ಶೇಕಡ 4ರ ಬಡ್ಡಿಗೆ ಆಧಾರ ರಹಿತ ಸಾಲ ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ರಾಜ್ಯದ ಹಾಲು ಉತ್ಪಾದಕರಿಗೆ ಗರಿಷ್ಠ 1.6 ಲಕ್ಷ ರೂಪಾಯಿವರೆಗೆ ಆಧಾರರಹಿತ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. 3 ಲಕ್ಷ ರೂಪಾಯಿವರೆಗೆ ಶೇಕಡ 4ರ ಬಡ್ಡಿ ಹಾಗೂ ಆಧಾರ ರಹಿತ ಸಾಲ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಕೃಷಿ ಸಾಲ ನೀಡುವ ಕ್ರಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಹಾಲು ಉತ್ಪಾದಕರಿಗೆ ವಿಸ್ತರಿಸಲಾಗಿದ್ದು, ಶೇಕಡ 7ರ ಬಡ್ಡಿದರದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಲ ಪಡೆದವರು ಸಕಾಲಕ್ಕೆ ಸಾಲ ಮರುಪಾವತಿಸಿದಲ್ಲಿ ಕೇಂದ್ರ ಸರ್ಕಾರದಿಂದ ಶೇಕಡ 3ರಷ್ಟು ಬಡ್ಡಿ ರಿಯಾಯಿತಿ ಸಿಗುತ್ತದೆ. ಇದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!