Thursday, June 4, 2026
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಜಿಲ್ಲಾ ಪಂಚಾಯತ್ ಸದಸ್ಯೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಜಿಲ್ಲಾ ಪಂಚಾಯತ್ ಸದಸ್ಯೆ

- Advertisement -
- Advertisement -

ಚಿಕ್ಕಬಳ್ಳಾಪುರ: ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಜಿಲ್ಲಾ ಪಂಚಾಯತಿ ಕ್ಷೇತ್ರದ ಹಾಲಿ ಸದಸ್ಯೆ ತನುಜಾ ರಘು ಪಾಸಾಗಿದ್ದಾರೆ.

ದ್ವಿತೀಯ ಪಿಯುಸಿ ಕಲಾ ವಿಭಾಗದ ಪರೀಕ್ಷೆಯನ್ನು ಖಾಸಗಿ ಅಭ್ಯರ್ಥಿಯಾಗಿ ಬರೆದಿದ್ದ ತನುಜಾ ರಘು, 600 ಅಂಕಗಳಿಗೆ 368 ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ.

ಈ ಹಿಂದೆ 2004 ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತೀರ್ಣರಾಗಿದ್ದ ತನುಜಾ ರಘು, ಈ ಬಾರಿ ಪಿಯುಸಿ ಪರೀಕ್ಷೆ ಬರೆದು ಫಸ್ಟ್ ಕ್ಲಾಸ್ ಅಂಕದೊಂದಿಗೆ ಪಾಸ್ ಆಗಿದ್ದರೆ.

ರಾಜಕಾರಣ ಹಾಗೂ ಜನಸಾಮಾನ್ಯರ ಸೇವೆಯ ಜೊತೆ ಜೊತೆಗೆ ತಮ್ಮ ವೈಯುಕ್ತಿಕ ಬದುಕಿಗೆ ವಿದ್ಯಾಭ್ಯಾಸವನ್ನು ಮುಂದುವರೆಸಿ, ದ್ವೀತಿಯ ಪಿಯುಸಿ ಪರೀಕ್ಷೆ ಪಾಸಾದ ಹಾಲಿ ಜಿಲ್ಲಾ ಪಂಚಾಯತಿ ಸದಸ್ಯೆಗೆ ಹಲವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -

Latest News

error: Content is protected !!