Tuesday, April 30, 2024
Homeತಾಜಾ ಸುದ್ದಿನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗಿಗೆ ಪಂಚ್ ನೀಡಿದ ಜೊಮ್ಯಾಟೋ ಡೆಲಿವರಿ ಬಾಯ್​

ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗಿಗೆ ಪಂಚ್ ನೀಡಿದ ಜೊಮ್ಯಾಟೋ ಡೆಲಿವರಿ ಬಾಯ್​

spot_img
- Advertisement -
- Advertisement -

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಆಹಾರ ಖರೀದಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ಜೊಮಾಟೊದಂತಹ ಆನ್ಲೈನ್ ಅಪ್ಲಿಕೇಷನ್ ಮೂಲಕ ಆಹಾರ ಆರ್ಡರ್ ಮಾಡ್ತಿದ್ದಾರೆ. ಜೊಮಾಟೊದಲ್ಲಿ ಆಹಾರ ಆರ್ಡರ್ ಮಾಡಿದ ಬೆಂಗಳೂರು ಮೂಲದ ಮೇಕಪ್ ಕಲಾವಿದೆ ಹಿತೇಶ ಚಂದ್ರನಿ ಎನ್ನುವವರಿಗೆ ಊಟ ಆರ್ಡರ್ ರದ್ದು ಮಾಡಿದ್ದು ಈಗ ದುಬಾರಿಯಾಗಿದೆ.

ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಅವವರು ತಮ್ಮ ರಕ್ತ ರಕ್ತಸಿಕ್ತ ವಾಗಿರುವ ಮೂಗಿನಲ್ಲಿ ಕಾಣಿಡಿಕೊಂಡಿದ್ದು, ಡೆಲಿವರಿ ಎಕ್ಸಿಕ್ಯೂಟಿವ್ ತನ್ನ ಆರ್ಡರ್ ಡೆಲಿವರಿ ವಿಳಂಬದ ಬಗ್ಗೆ ಪ್ರಶ್ನೆ ಮಾಡಿದ ನಂತರ ನನ್ನ ಮೇಲೆ ಮೇಲೆ ಹಲ್ಲೆ ನಡೆಸಿದ್ದಾನೆ ಅಂತ ಅವರು ಆರೋಪಿಸಿದ್ದಾರೆ. ಇದಲ್ಲದೇ ಡೆಲಿವರಿ ಬಾಯ್‌ ತನ್ನ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಹಿನ್ನೆಲೆ
ಹಿತೇಶಾ ಚಂದ್ರಾಣಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಮಧ್ಯಾಹ್ನ ಹಸಿವಾದಾಗ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್ಕಿಂಗ್ ಮಾಡಿದ್ದಾರೆ. ಆ್ಯಪ್​ ಲೆಕ್ಕಾಚಾರದ ಪ್ರಕಾರ 4.30ರ ಒಳಗಾಗಿ ಊಟ ತಲುಪಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಆಹಾರ ಬಾರದಿದ್ದಾಗ ಯುವತಿ ಗ್ರಾಹಕ ಸೇವಾ ಕೇಂದ್ರದ ಸಿಬ್ಬಂದಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ಹೇಳಿಕೊಂಡು, ತಡವಾಗುತ್ತಿರುವ ಕಾರಣ ಆರ್ಡರ್ ಕ್ಯಾನ್ಸಲ್ ಮಾಡಬಹುದಾ ಎಂದು ಕೇಳಿದ್ದಾರೆ.

ಇದೆಲ್ಲಾ ಆಗುವಾಗ ಡೆಲಿವರಿ ಬಾಯ್ ಮನೆಗೆ ಆಗಮಿಸಿದ್ದಾನೆ. ಮೊದಲೇ ತಡವಾಗಿದ್ದ ಕಾರಣ ಅಸಮಾಧಾನಗೊಂಡ ಯುವತಿ, ಜೊಮ್ಯಾಟೋ ಟೀಂ ಜೊತೆ ಮಾತಾಡಿದ್ದೇನೆ. ಈಗ ನನಗೆ ಯಾವುದೇ ಖರ್ಚಿಲ್ಲದೇ ಊಟ ಕೊಡ್ತೀರಾ? ನಿಮ್ಮ ಕಡೆಯವರಿಂದ ಉತ್ತರ ಬರುವ ತನಕ ಕಾದು ನಿಲ್ಲಲು ಸೂಚಿಸಿದ್ದಾರೆ. ಆದರೆ, ಯುವತಿ ಹೇಳುವ ಪ್ರಕಾರ ಮೊದಲೇ ಸಿಡಿಮಿಡಿ ಎನ್ನುತ್ತಿದ್ದ ಡೆಲಿವರಿ ಬಾಯ್, ಕಾಯಲು ಹೇಳಿದಾಕ್ಷಣ ಬಾಯಿಗೆ ಬಂದಂತೆ ಮಾತನಾಡಿ ನಾನೇನು ನಿಮ್ಮ ಆಳಾ? ಎಂದು ಕೂಗಾಡಿದ್ದಾನೆ. ಭಯಗೊಂಡ ಯುವತಿ ಬಾಗಿಲು ಹಾಕಿಕೊಳ್ಳಲು ಮುಂದಾದಾಗ ಜೋರಾಗಿ ಬಾಗಿಲು ತಳ್ಳಿದಾತ ಸೀದಾ ಒಳನುಗ್ಗಿ ಟೇಬಲ್ಲಿನ ಮೇಲಿಟ್ಟಿದ್ದ ಪೊಟ್ಟಣವನ್ನು ಕಿತ್ತುಕೊಂಡಿದ್ದಲ್ಲದೇ, ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ.

ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾದ ಯುವತಿಯ ಮೂಗಿನಿಂದ ರಕ್ತ ಸುರಿಯಲಾರಂಭಿಸಿದ್ದು, ಕಂಗಾಲಾಗಿ ಘಟನೆಯ ಬಗ್ಗೆ ವಿಡಿಯೋ ಮಾಡಿದ್ದಾರೆ. ಭಯಗೊಂಡ ಮಹಿಳೆ ಸಹಾಯಕ್ಕೆ ಯಾರೂ ಬರದ ಕಾರಣ, ಆಸ್ಪತ್ರೆಗ ಹೋದ ಯುವತಿ ಚಿಕಿತ್ಸೆ ಪಡೆದಿದ್ದಾರೆ. ಯುವತಿ ವಿಡಿಯೋದಲ್ಲಿ ತಿಳಿಸಿರುವಂತೆ ಮೂಗಿನ ಮೂಳೆಗೆ ಬಲವಾದ ಹೊಡೆತ ಬಿದ್ದಿರುವ ಕಾರಣ ಅದರಲ್ಲಿ ಬಿರುಕು ಮೂಡಿದ್ದು, ಸರ್ಜರಿ ಮಾಡಿಸಿಕೊಳ್ಳಬೇಕಾಗಿದೆ. ಸದ್ಯ ಈ ಕುರಿತು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆದಷ್ಟು ಬೇಗ ಆರೋಪಿ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

- Advertisement -
spot_img

Latest News

error: Content is protected !!